ವಾಷಿಂಗ್ಟನ್ : ಇರಾನ್ ಅಮೇರಿಕಾ ಯುದ್ಧದ ನಡುವೆ ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಶೂಟ್ ಔಟ್ ಆಗಿದೆ. ಅಮೆರಿಕದ ವಾಷಿಂಗ್ಟನ್ ಹಿಲ್ಟನ್ ಹೋಟೆಲ್ ನಲ್ಲಿ ಗುಂಡಿನ ದಾಳಿ ನಡೆದಿದೆ. ವೈಟ್ ಹೌಸ್ ಪ್ರತಿನಿಧಿಗಳ ಔತಣಕೂಟದಲ್ಲಿ ಈ ಒಂದು ಗುಂಡಿನ ದಾಳಿ ನಡೆದಿದೆ.
ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಕ್ಷಣ ಟ್ರಂಪ್ ಅವರನ್ನು ಸುರಕ್ಷಿತ ಸಿಬ್ಬಂದಿಗಳು ಕರೆದುಕೊಂಡು ಹೋಗಿದ್ದಾರೆ. ಅಮೆರಿಕ ಅಧ್ಯಕ್ಷ ಟ್ರಂಪ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ನಡೆದಿದ್ದು, ದಾಳಿಯ ವೇಳೆ ವೇದಿಕೆ ಮೇಲೆ ರೊನಾಲ್ಡ್ ಟ್ರಂಪ್ ಇದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಘಟನೆ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.








