ಬೆಳಗಾವಿ : ಬೆಳಗಾವಿಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ವಿದ್ಯುತ್ ಅಂತಿ ದುರಸ್ತಿ ಮಾಡುವ ವೇಳೆ ಶಾಕ್ ಹೊಡೆದು ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಎಂಬ ಗ್ರಾಮದಲ್ಲಿ ನಡೆದಿದೆ.
ಹೆಸ್ಕಾಂ ಸಿಬ್ಬಂದಿ ಮಾರುತಿ ಹವಲಿ (25) ಸಾವನ್ನಪ್ಪಿದ್ದಾರೆ. ವಿದ್ಯುತ್ ಕಂಬ ಹತ್ತಿ ವಿದ್ಯುತ್ ದುರಸ್ತಿ ಮಾಡುತ್ತಿದ್ದಾಗ ಈ ಒಂದು ಅವಘಡ ಸಂಭವಿಸಿದೆ. ವಿದ್ಯುತ್ ಕಂಬದಲ್ಲಿ ಹೆಸ್ಕಾಂ ಸಿಬ್ಬಂದಿ ಮೃತದೇಹ ನೇತಾಡುತ್ತಿದೆ. ಕಳೆದ 3 ಗಂಟೆಯಿಂದ ಮೃತದೇಹ ನೇತಾಡುತ್ತಿದ್ದರು ಶವ ಕೆಳಗೆ ಇಳಿಸಲು ಅಧಿಕಾರಿಗಳು ಇನ್ನೂ ಸಹ ಸ್ಥಳಕ್ಕೆ ಬಂದಿಲ್ಲ. ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಸೌದತ್ತಿ ಪೊಲೀಸ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿದೆ.