ಬಳ್ಳಾರಿ : ಬಳ್ಳಾರಿ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೃಷಿಹೊಂಡದಲ್ಲಿ ಬಿದ್ದು 13 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ.
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಕರ್ಜಿಗನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕನನ್ನು ವೀರೇಶ್ (13) ಎಂದು ಗುರುತಿಸಲಾಗಿದೆ.
ಕುರಿ ಮೇಯಿಸಲು ಹೋಗಿದ್ದ ವೀರೇಶ್ ಕೆರೆಯಲ್ಲಿ ನೀರು ಕುಡಿಯಲು ಹೋಗಿ ಆಯತಪ್ಪಿ ಕೃಷಿಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾನೆ .ಸದ್ಯ ಶವವನ್ನು ಹೊರ ತೆಗೆಯಲಾಗಿದ್ದು, ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.