ಬೆಂಗಳೂರು : ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿಯೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಲ್ಲುಬಾಳು ಗ್ರಾಮದಲ್ಲಿ ಒಡಿಶಾ ಮೂಲದ ಸೀಮಾ ನಾಯಕ್ (25), ರಾಕೇಶ್ (23) ಮೃತರು ಎಂದು ಗುರುತಿಸಲಾಗಿದೆ.
ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ. ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಅನುಮಾನಗೊಂಡು ಕಿಟಕಿ ಗಾಜು ಒಡೆದು ನೋಡಿದಾಗ ಬೆಳಕಿಗೆ ಬಂದಿದೆ. ಕೂಡಲೇ ಜಿಗಣಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಪದೇ ಪದೇ ಕುಡಿದು ಬಂದು ರಾಕೇಶ್ ಪಾತ್ರ ಜಗಳ ಮಾಡುತ್ತಿದ್ದ ಭಾನುವಾರವೂ ಜಗಳ ಮಾಡಿದ್ದ. ಅಂದು ಬೆಳಗ್ಗೆ ಎದ್ದಾಗ ರಾಕೇಶ್ ಪಾತ್ರ ನೇಣು ಬಿಗಿದುಕೊಂಡಿದ್ದ. ಬಳಿಕ ಸೀಮಾ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.