ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಘೋರ ಘಟನೆ ನಡೆದಿದ್ದು, ಪತ್ನಿಯನ್ನು ಕೊಂದು ಪತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಸುಬ್ರಹ್ಮಣ್ಯಪುರದ ಚಿಕ್ಕಗೌಡನ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ಪತ್ನಿ ಬೇಬಿ (65) ಕೊಂದು ಬಳಿಕ ವೆಂಕಟೇಶ್ (65) ಆತ್ಮಹತ್ಯೆಗೆ ಶರಣಾಗಿದ್ದಾರೆ.
ವೆಂಕಟೇಶ್ ಅವರು ಬಿಎಂಟಿಸಿ ಡ್ರೈವರ್ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಪತ್ನಿ ಬೇಬಿಗೆ ಸ್ಟ್ರೋಕ್ ಆಗಿ ವ್ಹೀಲ್ ಚೇರ್ ನಲ್ಲಿ ಜೀವನ ಸಾಗಿಸುತ್ತಿದ್ದರು. ಸಣ್ಣ ಪುಟ್ಟ ವಿಚಾರಗಳಿಗೂ ಇಬ್ಬರಿಗೂ ಜಗಳ ಆಗುತ್ತಿತ್ತು. ಮಕ್ಕಳು ಹೊರಗಡೆ ಹೋದಾಗ ಜಗಳ ಮಾಡುತ್ತಿದ್ದರು. ಗಲಾಟೆ ವಿಕೋಪಕ್ಕೆ ಹೋಗಿ ವೈರ್ ನಿಂದ ಪತ್ನಿ ಕುತ್ತಿಗೆ ಬಿಗಿದು ಬಳಿಕ ವೆಂಕಟೇಶನ್ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








