ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಘೋರವದ ದುರಂತ ಒಂದು ಸಂಭವಿಸಿದ್ದು, ದನ ಮೇಯಿಸಲು ತೆರಳಿದಾಗ ಮರಕ್ಕೆ ತಗುಲಿದ್ದ ವಿದ್ಯುತ್ ತಂತಿ ತಗುಲಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ನಡೆದಿದೆ.
ವಿದ್ಯುತ್ ತಂತಿ ತಗುಲಿ ರೈತ ಸಾವನಪ್ಪಿದ್ದಾರೆ. ಬೈರಾಪುರ ಗ್ರಾಮದ ನಾಗೇಶ್ ಗೌಡ (65) ಎನ್ನುವ ರೈತ ದುರ್ಮರಣ ಹೊಂದಿದ್ದಾರೆ. ದನ ಮೇಯಿಸಲು ತೆರಳಿದ್ದಾಗ ಈ ಒಂದು ದುರ್ಘಟನೆ ಸಂಭವಿಸಿದೆ. ತಗುಲಿದ್ದ ವಿದ್ಯುತ್ ಪ್ರವಹಿಸಿ ರೈತ ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.