ದಾವಣಗೆರೆ : ಬಾಲಕನೊರ್ವ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎಪಿಎಂಸಿ ಸಮೀಪದ ರೈಲ್ವೆ ಅಂಡರ್ ಪಾಸ್ ಬಳಿ ನಡೆದಿದೆ. ಮೃತ ಬಾಲಕನನ್ನು ನಗರದ ಸಮೀಪದ ಹಳೇ ಚಿಕ್ಕನಹಳ್ಳಿಯ ತರುಣ್ (16) ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಹುಬ್ಬಳ್ಳಿಗೆ ಚಲಿಸುವ ರೈಲಿಗೆ ಬೆಳಗಿನ ಜಾವ ಬಾಲಕ ಬಿದ್ದಿದ್ದು, ಬಾಲಕಕನ ದೇಹ ಒಂದು ಕಡೆ, ಶಿರ ಒಂದು ಕಡೆ ಬಿದ್ದಿದೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಶವಾಗಾರಕ್ಕೆ ರವಾನಿಸಿದ್ದಾರೆ. ಈ ಘಟನೆ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








