ಕಲಬುರ್ಗಿ : ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ನಂದಿನಿ (16) ಮತ್ತು ಸಂಜನಾ (17) ಎಂಬ ಇಬ್ಬರು ಬಾಲಕಿಯರ ಶವಗಳು ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿವೆ.
ಅಘಾತ ವಿಷಯ ಏನೆಂದರೆ, ಇಬ್ಬರ ಕೈಗಳನ್ನು ಹಗ್ಗದಿಂದ ಕಟ್ಟಿದ ಸ್ಥಿತಿಯಲ್ಲಿ ಶವಗಳು ಕಂಡುಬಂದಿರುವುದು ಪ್ರಕರಣಕ್ಕೆ ಗಂಭೀರ ತಿರುವು ನೀಡಿದೆ. ಇಬ್ಬರೂ ಅಣ್ಣ-ತಮ್ಮಂದಿರ ಮಕ್ಕಳಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ. ಈ ಸಂಬಂಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿವಿಧ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ.








