ಕೋಲಾರ : ಕೋಲಾರದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ತಾಯಿ, ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೋಲಾರ ತಾಲೂಕಿನ ಹೊಗರಿಗೊಲ್ಲಹಳ್ಳಿಯಲ್ಲಿ ಜಾನುವಾರುಗಳಿಗೆ ಮೇವು ತರಲು ಹೋಗಿದ್ದ ವೇಳೆ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ತಾಯಿ ಮಾಲಾ (30) ಹಾಗೂ ಮಗು ಚಕ್ರವರ್ತಿ (06) ಸಾವನ್ನಪ್ಪಿದ್ದಾರೆ.
ಕಾಲುಜಾರಿ ಕೃಷಿ ಹೊಂಡದಲ್ಲಿ ಬಿದ್ದಿದ್ದ ಮಗನನ್ನು ರಕ್ಷಿಸಲು ಹೋಗಿ ಮಾಲಾ ಕೂಡ ಸಾವನ್ನಪ್ಪಿದ್ದು, ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.








