ಕೋಲಾರ : ಕೋಲಾರ ಜಿಲ್ಲೆಯಲ್ಲಿ ಘೋರ ಘಟನೆ ನಡೆದಿದ್ದು, ಕಲ್ಲು ಕ್ವಾರಿಯಲ್ಲಿ ಲಾರಿ ಚಕ್ರಕ್ಕೆ ಸಿಲುಕಿ ಕಾರ್ಮಿಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿಟಗಾನಹಳ್ಳಿ ಗ್ರಾಮದಲ್ಲಿರುವ ಕಲ್ಲು ಕ್ವಾರಿಯಲ್ಲಿ ಕಲ್ಲು ಲೋಡ್ ಮಾಡುವಾಗ ಲಾರಿ ಚಕ್ರಕ್ಕೆ ಸಿಲುಕಿ ಬಿಹಾರ ಮೂಲದ ಕಾರ್ಮಿಕ ರೂಪೇಶ್ (30) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕ್ಷೇತ್ರನಹಳ್ಳಿ ವೆಂಕಟೇಶ್ ಎಂಬುವರಿಗೆ ಸೇರಿದ ದಿನೇಶ್ ಎಂಟರ್ ಪ್ರೈಸಸ್ ನಲ್ಲಿ ಈ ಅವಘಡ ಸಂಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.