ರಾಯಚೂರು : ರಾಯಚೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಗ್ರಾನೈಟ್ ಗಣಿಯಲ್ಲಿ ಸಿಡಿಮದ್ದು ಸ್ಪೋಟಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ರಾಯೂಚರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮಾಕಾಪುರ ಗ್ರಾಮದ ಬಳಿಯ ಗ್ರಾನೈಟ್ ಗಣಿಯಲ್ಲಿ ಸಿಡಿಮದ್ದು ಸ್ಪೋಟಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕನನ್ನು ವೆಂಕಟೇಶ್ (38) ಎಂದು ಗುರುತಿಸಲಾಗಿದೆ.
ಮೃತ ವೆಂಕಟೇಶ್ ಅವರು ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಮೆಣಸಿಗೆರೆ ಗ್ರಾಮದ ನಿವಾಸಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.