ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಯುವತಿಯೋರ್ವಳ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ.
ಕೊಲೆಯಾದ ಯುವತಿಯನ್ನು ಜೋಯಾ ಎಂದು ತಿಳಿದುಬಂದಿದ್ದು, ಆಕೆಯ ಕತ್ತು ಕೊಯ್ದು ಭೀಕರವಾಗಿ ಹತ್ಯೆಗೈದ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಕೊಲೆ ನಡೆದಿದ್ದು ಸದ್ಯ ಆರೋಪಿ ಪತ್ತೆಗಾಗಿ ಡಿಜೆ ಹಳ್ಳಿ ಠಾಣೆ ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ.








