ಬೆಂಗಳೂರು : ಬೆಂಗಳೂರಿನಲ್ಲಿ ಹಳೇ ದ್ವೇಷಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಬೆಂಗಳೂರಿನ ಜೆ.ಜೆ ನಗರದ ಜನತಾ ಕಾಲೋನಿಯಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಮಾತುಕತೆಗೆ ಅಂತ ಕರೆಸಿ ವಿಜಯ್ (26) ಎನ್ನುವ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಹತ್ಯೆಯಾದ ವಿಜಯ್ ನಿನ್ನ ಅಷ್ಟೆ ಜೈಲಿನಿಂದ ಹೊರಗಡೆ ಬಂದಿದ್ದ. ಸದ್ಯ ಘಟನಾ ಸ್ಥಳಕ್ಕೆ ಜೆ.ಜೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆ ಕುರಿತಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ