ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಇಂದು ಮುಂಜಾನೆ ಈ ಒಂದು ಘಟನೆ ನಡೆದಿದೆ.
ಮಾರಕಾಸ್ತ್ರಗಳಿಂದ ತಲೆಯ ಮೇಲೆ ಹಲ್ಲೆ ನಡೆಸಿ ಕಿರಣ್ (25) ಎನ್ನುವ ಯುವಕನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯಾದ ಕಿರಣ್ ಅಪರಾಧ ಪ್ರಕರಣಗಳ ಹಿನ್ನೆಲೆ ಹೊಂದಿದ್ದ ಎನ್ನಲಾಗಿದೆ. ಇಂದು ಮುಂಜಾನೆ ಕಿರಣನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ರಾಮಮೂರ್ತಿ ನಗರದ ಟಿಸಿ ಪಾಳ್ಯ ಮುಖ್ಯ ರಸ್ತೆಯಲ್ಲಿ ಈ ಒಂದು ಕೊಲೆ ನಡೆದಿದೆ.ಘಟನಾ ಸ್ಥಳಕ್ಕೆ ರಾಮಮೂರ್ತಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








