ಮೈಸೂರು : ಮೈಸೂರಿನಲ್ಲಿ ಭೀಕರವಾದ ಕೊಲೆ ನಡೆದಿದ್ದು ಮಚ್ಚು ಲಾಂಗುಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ವ್ಯಕ್ತಿ ಒಬ್ಬರನ್ನು ಬರಬರವಾಗಿ ಕೊಲೆ ಮಾಡಿದ್ದಾರೆ ಮೈಸೂರು ಜಿಲ್ಲೆಯ ಟಿ ನರಸೀಪುರ ಪಟ್ಟಣದಲ್ಲಿ ಈ ಒಂದು ಕೊಲೆ ನಡೆದಿದೆ.
ಟಿ ನರಸೀಪುರ ಹಳೆ ತಿರುಮಕೂಡಲಿನ ವಿನೋದ್ (32) ಎನ್ನುವ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.ಘಟನಾ ಸ್ಥಳಕ್ಕೆ ಟಿ ನರಸಿಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಲ್ಲೆ ಮಾಡಿ ಕೊಲೆ ಮಾಡಿದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.








