ವಿಜಯಪುರ : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಹಳೇ ದ್ವೇಷ ಹಿನ್ನೆಲೆ ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಾಗರ್ ಬೆಳುಂಡಗಿ (25), ಇಸಾಕ್ ಖುರೇಶಿ (24) ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
2 ವರ್ಷದ ಹಿಂದೆ ಗ್ರಾಮದ ಈರಣ್ಣಗೌಡ ಮೇಲೆ ಕೊಲೆಯಾದ ಸಾಗರ್ ಹಾಗೂ ಇಸಾಕ್ ಹಲ್ಲೆ ನಡೆಸಿದ್ದರು. ಕೆಲ ದಿನಗಳ ಹಿಂದೆ ಚಿಕಿತ್ಸೆ ಫಲಿಸದೇ ಈರಣ್ಣಗೌಡ ಮೃತಪಟ್ಟಿದ್ದ. ಇದೇ ದ್ವೇಷಕ್ಕೆ ಕೊಲೆಗೈದಿರುವ ಸಂಶಯ ವ್ಯಕ್ತವಾಗಿದ್ದು, ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.