ಮಂಡ್ಯ : ಆಸ್ತಿಗಾಗಿ ಅಣ್ಣ, ಅಣ್ಣನ ಮಕ್ಕಳಿಂದ ತಮ್ಮನನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಯೋಗೇಶ್(35) ಎಂದು ತಿಳಿದುಬಂದಿದೆ.
ಮೃತ ಯೋಗೇಶನ ಅಣ್ಣ ಲಿಂಗರಾಜ, ಅಣ್ಣನ ಮಕ್ಕಳಾದ ಭರತ್, ದರ್ಶನ್ ಹತ್ಯೆ ಮಾಡಿದ್ದಾರೆ. ಬುಧವಾರ ಮೃತ ಯೋಗೇಶ್ ಮದುವೆ ಫಿಕ್ಸ್ ಆಗಿತ್ತು. ಇಂದು ಬೆಳಿಗ್ಗೆ ಮನೆಯ ಕೊಟ್ಟಿಗೆಯಲ್ಲೇ ಹರಿತವಾದ ಆಯುಧಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆ ಬಳಿಕ ಮೂವರು ಆರೋಪಿಗಳು ಪರಾರಿ ಆಗಿದ್ದಾರೆ.
ಆಸ್ತಿಗಾಗಿ ಸಹೋದರರ ನಡುವೆ ಆಗಿಂದಾಗ್ಗೆ ಜಗಳ ನಡೆಯುತ್ತಿತ್ತು. ಇಂದು ಜಗಳ ವಿಕೋಪಕ್ಕೆ ತಿರುಗಿ ಹತ್ಯೆಯಲ್ಲಿ ಅಂತ್ಯವಾಗಿದೆ.
ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಕೆರಗೋಡು ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.








