ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಆಂಬುಲೆನ್ಸ್ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದ ಬಳಿ ಅಪಘಾತ ಸಂಭವಿಸಿದ್ದು, ರಿಚ್ಮಂಡ್ ಸರ್ಕಲ್ ಕಡೆಯಿಂದ ವೇಗವಾಗಿ ಬಂದ್ ಆಂಬುಲೆನ್ಸ್ ರೆಡ್ ಸಿಗ್ನಲ್ ಇದ್ದ ಕಾರಣ ಬೈಕ್ ಗಳನ್ನು ಸವಾರರು ನಿಲ್ಲಿಸಿದ್ದರು. ಈ ವೇಳೆ ಹಿಂಬದಿಯಿಂದ ಬಂದು ಬೈಕ್ ಗಳಿಗೆ ಆಂಬುಲೆನ್ಸ್ ಚಾಲಕ ಗುದ್ದಿದ್ದಾನೆ. ಬೈಕ್ ನ್ನು 50 ಮೀಟರ್ ದೂರು ಎಳೆದೊಯ್ದಿದ್ದಾನೆ. ಅಪಘಾತದ ಬಳಿಕ ಚಾಲಕ ಪರಾರಿಯಾಗಿದ್ದಾನೆ.
ಇಸ್ಮಾಯಿಲ್(40), ಸಮೀನಾಬಾನು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳು ಸಿದ್ದಿಖಿ ಸೇರಿ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಗಳಿಗೆ ಡಿಕ್ಕಿ ಹೊಡೆದು ಪೊಲೀಸ್ ಚೌಕಿಗೆ ಆಂಬುಲೆನ್ಸ್ ಡಿಕ್ಕಿಯಾಗಿದೆ. ಅತಿವೇಗ, ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಳಿಕ ಆಕ್ರೋಶಗೊಂಡ ಜನ ಆಂಬುಲೆನ್ಸ್ ದೂಡಿ ಪಲ್ಟಿ ಹೊಡೆಸಿದ್ದಾರೆ.








