ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮಾಕಳಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ದೊಡ್ಡಬಳ್ಳಾಪುರದ ಮಾಕಾಳಿಯಲ್ಲಿ ನಡೆದಿದ್ದು, ಇನ್ನೋವ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ನಾಲ್ವರ ದೇಹಗಳು ನಾನಾ ಕಡೆ ಬಿದ್ದಿರುವ ಸನ್ನಿವೇಶ ಕಂಡು ಬಂದಿದೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿದ್ದು, ಶವಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ ಅಂತ ತಿಳಿದು ಬಂದಿದೆ.
ಬೆಳಗ್ಗೆ ದೇವಸ್ಥಾನಕ್ಕೆಂದು ಇನ್ನೋವಾ ಕಾರಿನಲ್ಲಿ 8 ಮಂದಿ ಬಂದಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ನಾಲ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಶ್ವರಪ್ಪ, ಪುರುಷೋತ್ತಮ, ಕಾಳಪ್ಪ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ದೊಡ್ಡಬಳ್ಳಾಪುರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಉಚಿತ ಸುದ್ದಿ ಪಡೆದುಕೊಳ್ಳುವುದಕ್ಕೆ ನಮ್ಮ ವಾಟ್ಸಪ್ ಗುಂಪು ಸೇರಿಕೊಳ್ಳಿ
https://chat.whatsapp.com/IrUCOvj6lb9BOTe0MLkeaY