ಬೆಂಗಳೂರು : ರಾಜ್ಯದಲ್ಲಿ ಇಂದು ಭೀಕರವಾದ ರಸ್ತೆ ಅಪಘಾತವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಒಂದು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಉಸಿರು ಚೆಲ್ಲಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಎಂಬಲ್ಲಿ ನಡೆದಿದೆ.
ಹೌದು ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದ ಮಾಕಳಿ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಇನ್ನೋವಾ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿಯಲ್ಲಿ ನಡೆದಿದೆ.
ಬೆಳಿಗ್ಗೆ ದೇವಸ್ಥಾನಕ್ಕೆ ಎಂದು ಕಾರಿನಲ್ಲಿ ಎಂಟು ಜನರು ತೆರಳುತ್ತಿದ್ದರು. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿ ಸಾವನ್ನುಪ್ಪಿದ್ದರೆ, ಇನ್ನುಳಿದ ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ಈಶ್ವರಪ್ಪ, ಪುರುಷೋತ್ತಮ, ಕಾಳಪ್ಪ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಮೃತ ದೇಹಗಳು ರಸ್ತೆಯ ಮೇಲೆ ಚಲ್ಲಾಪಿಲ್ಲಿ ಆಗಿ ಬಿದ್ದಿವೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.