ಉಡುಪಿ : ಉಡುಪಿಯಲ್ಲಿ ಕಾಂಗ್ರೆಸ್ ಯುವ ಮುಖಂಡನ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ ಭೀಕರ ಮಾಡಿದ್ದಾರೆ. ತಲ್ವಾರ್ ಹಾಗೂ ಕಬ್ಬಿಣದ ಚೇರ್ನಿಂದ ಕಾಂಗ್ರೆಸ್ ಯುವ ಮುಖಂಡ ಶರತ್ ಕುಂದರ್ ಮೇಲೆ ಹಲ್ಲೆ ಮಾಡಿದ್ದಾರೆ.
ಎನ್‌ಎಸ್‌ಯುಐ ಉಪಾಧ್ಯಕ್ಷ ಶರತ್ ಕುಂದರಿಗೆ ಗಂಭೀರವಾದ ಗಾಯಗಳಾಗಿದ್ದು, ಮಾತುಕತೆಗೆ ಎಂದು ಕರೆಸಿ ಉಡುಪಿ ನಗರದ ಪಿಪಿಸಿ ಕ್ರಾಸ್ ಬಳಿ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಶರತ್ ಕುಂದರ ಮೇಲೆ ಆರರಿಂದ ಏಳು ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಘಟನೆ ಸಂಭಂದ ಉಡುಪಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.








