ಬೆಂಗಳೂರು : ಬೆಂಗಳೂರಲ್ಲಿ ಘೋರ ದುರಂತ ಸಂಭವಿಸಿದ್ದು, ಲಾರಿ ರಿವರ್ಸ್ ತೆಗೆಯುವಾಗ ವಿದ್ಯುತ್ ಶಾಕ್ ಗೆ ಚಾಲಕ ಮೃತಪಟ್ಟ ಘಟನೆ ನಡೆದಿದೆ.
ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಉತ್ತರ ಪ್ರದೇಶ ಮೂಲದ ಚೋಟಾಕ್ (45) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ 9 ಗಂಟೆ ವೇಳೆಗೆ ಸನ್ ಸಿಟಿ ಸಮೀಪದ ಬಲಮುರಿ ಗಣೇಶ ದೇವಸ್ಥಾನದ ಬಳಿ ಘಟನೆ ನಡೆದಿದೆ.
ಚೋಟಾಲ್ ವಿದ್ಯುತ್ ಕಂಬದ ಪಕ್ಕದಲ್ಲಿ ಲಾರಿ ಚಲಾಯಿಸಿದ ಪರಿಣಾಮ ಲಾರಿಯ ಟಾಪ್ ಗೆ ವಿದ್ಯುತ್ ತಂತಿ ಸಿಲುಕಿದೆ. ನಂತರ ಲಾರಿ ಮುಂದಕ್ಕೆ ಚಲಿಸಿದ್ದು, ವಿದ್ಯುತ್ ಕಂಬ ಮುರಿದು ಬಿದ್ದು ರಸ್ತೆಗೆ ಬಿದ್ದಿದೆ. ಈ ವೇಳೆ ವಿದ್ಯುತ್ ಶಾಕ್ ನಿಂದ ಚೋಟಾಕ್ ಮೃತಪಟ್ಟಿದ್ದಾರೆ. ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.