ಚಿತ್ರದುರ್ಗ : ಚಿತ್ರದುರ್ಗದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ವಿದ್ಯುತ್ ತಂತಿ ತಗುಲಿ ಅಸ್ವಸ್ಥಗೊಂಡಿದ್ದ ಮೂವರು ಸಾವನ್ನಪ್ಪಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕಾಳಘಟ್ಟದಲ್ಲಿ ವಿದ್ಯುತ್ ತಂತಿ ತಗುಲಿ ಅಸ್ವಸ್ಥರಾಗಿದ್ದ ಮೂವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ದಾವಣಗೆರೆ ಮೂಲದ ಕಾರ್ಮಿಕ ನಜೀರ್ (30), ಫಾರುಕ್ (30), ಹೊಳಲ್ಕೆರೆ ತಾಲೂಕಿನ ಗ್ಯಾರೆಹಳ್ಳಿಯ ಶ್ರೀನಿವಾಸ್ (35) ಮೃತಪಟ್ಟಿದ್ದಾರೆ.
ಶ್ರೀನಿವಾಸ್ ತೋಟದಲ್ಲಿ ಅಡಕೆ ಶೆಡ್ ನಿರ್ಮಾಣದ ವೇಳೆ ದುರಂತ ಸಂಭವಿಸಿದ್ದು, ಕಬ್ಬಿಣದ ಕಂಬ ನೆಡುವ ವೇಳೆ ವಿದ್ಯುತ್ ತಂತಿ ತಗುಲಿ ಅವಘಡ ಸಂಭವಿಸಿದೆ. ತೀವ್ರ ಅಸ್ವಸ್ಥಗೊಂಡಿದ್ದ ಮೂವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೂವರು ಮೃತಪಟ್ಟಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.