ಮಂಡ್ಯ : ಮಂಡ್ಯದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಯುವಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಶ್ಚಿಮವಾಹಿನಿಯ ಬಳಿ ಈ ಒಂದು ದುರ್ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವಕನನ್ನು ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಆಕಾಶ್ (24) ಎಂದು ಗುರುತಿಸಲಾಗಿದೆ. ಆಕಾಶ್ ಮೈಸೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ.
ರೈಲು ಹರಿದ ರಭಸಕ್ಕೆ ರುಂಡ ಮತ್ತು ಮುಂಡ ಬೇರ್ಪಟ್ಟಿವೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಘಟನಾ ಸ್ಥಳಕ್ಕೆ ಮೈಸೂರು ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.