ಯಾದಗಿರಿ : ಯಾದಗಿರಿ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆಯ ವಡಿಗೇರಾ ತಾಲೂಕಿನ ಕಂಠಿ ತಾಂಡಾದಲ್ಲಿ ಕಟ್ಟಿಗೆ ತರಲು ಹೋಗಿದ್ದ ವೇಳೆ ಕೃಷಿಹೊಂಡಕ್ಕೆ ಬಿದ್ದು, ತಾಯಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
ನೀಲಾಭಾಯಿ (32), ರಾಜೇಶ್ವರಿ (11), ಡುಮ್ಮಿ (6) ಮೃತಪಟ್ಟ ದುರ್ದೈವಿಗಳು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಡಿಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೃಷಿ ಹೊಂಡದಲ್ಲಿ ನೀರು ಕುಡಿಯುವಾಗ ಕಾಲು ಜಾರಿ ಬಿದ್ದು ದುರಂತ ಸಂಭವಿಸಿದೆ. ಗ್ರಾಮಸ್ಥರು ಕೃಷಿಹೊಂಡದಿಂದ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಯಾದಗಿರಿಯ ಯಿಮ್ಸ್ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದೆ.