ಕೊಪ್ಪಳ : ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ಅಧಿಕಾರಿ ಒಬ್ಬರು ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿರುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬೆಲೆಗೆ ಬಿದ್ದಿರುವ ಘಟನೆ ಕೊಪ್ಪಳದ ತೋಟಗಾರಿಕಾ ಇಲಾಖೆಯ ಕಛೇರಿಯಲ್ಲಿ ನಡೆದಿದೆ.
ಹೌದು 1 ಲಕ್ಷ ಲಂಚ ಸ್ವೀಕರಿಸುವಾಗ ಹಿರಿಯ ಸಹಾಯಕ ನಿರ್ದೇಶಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ತೋಟಗಾರಿಕೆ ಕಚೇರಿಯಲ್ಲಿ ಅಧಿಕಾರಿ ಬಲೆಗೆ ಬಿದ್ದಿದ್ದಾರೆ.ಹಿರಿಯ ಸಹಾಯಕ ನಿರ್ದೇಶಕ ಎಚ್ ಮಹೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇದೀಗ ಎಚ್ ಮಹೇಶ್ ಅವರನ್ನು ವಶಕ್ಕೆ ಪಡೆದುಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.