ವಿಜಯಪುರ : ಕಳೆದ ಕೆಲವು ತಿಂಗಳ ಹಿಂದೆ ವಿಜಯಪುರ ನಗರದಲ್ಲಿ ಕೃಷ್ಣ ಪ್ಯಾಲೇಸ್ ಹೋಟೆಲ್ , ಸಂಪೂರ್ಣವಾಗಿ ಸುಟ್ಟು ಬೆಂಕಿಗೆ ಆಹುತಿಯಾಗಿತ್ತು. ಇದೀಗ ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹೊತ್ತಿಯುರಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಹೊಟೇಲ್‌ವೊಂದರಲ್ಲ ನಡೆದಿದೆ.
ಹೌದು ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಹೋಟೆಲ್‌ನಲ್ಲಿ ಏಕಾಏಕಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಲಕ್ಷಾಂತರ ಮೌಲ್ಯದ ಅಪಾರ ಪ್ರಮಾಣದ ವಸ್ತುಗಳು ಹಾನಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸಿದ್ದಾರೆ. ಇಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.








