ಉತ್ತರಕನ್ನಡ : ಅಡುಗೆ ಅನಿಲ ಸೋರಿಕೆಯಾಗಿ ಮನೆಗೆ ದಿಡೀರ್ ಎಂದು ಬೆಂಕಿ ಹತ್ತಿಕೊಂಡಿರುವ ಘಟನೆ ಕೆಣಿ ಗ್ರಾಮದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕೇಣಿ ಎಂಬ ಗ್ರಾಮದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಗ್ರಾಮದ ಸುದರ್ಶನ ಎಂಬುವವರ ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಈ ಒಂದು ಅಗ್ನಿ ಅನಾಹುತದಲ್ಲಿ 12 ವರ್ಷದ ಬಾಲಕಿಗೆ ಗಂಭೀರವಾದ ಗಾಯಗಳಾಗಿದ್ದು ತಕ್ಷಣ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಅಂಕೋಲ ಸಿಪಿಐ ಹಿರೇಮಠ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.








