ಕಲಬುರ್ಗಿ : ಶಾರ್ಟ್ ಸರ್ಕ್ಯೂಟ್ ನಿಂದ ಹೊಲದಲ್ಲಿದ್ದಂತಹ ತೋಟದ ಮನೆಗೆ ಬೆಂಕಿ ಬಿದ್ದ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಮನೆಯಲ್ಲಿದ್ದ ಸುಮಾರು 10 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿರಾಳ್ ಗ್ರಾಮದಲ್ಲಿ ಈ ಒಂದು ಬೆಂಕಿ ಅವಘಡ ಸಂಭವಿಸಿದೆ.
ಹೌದು ಯಡ್ರಾಮಿ ತಾಲೂಕಿನ ಬಿರಾಳ್ ಗ್ರಾಮದ ಈರಣ್ಣ ಭಜಂತ್ರಿ ಎಂಬ ರೈತರಿಗೆ ಸೇರಿದ ತೋಟದ ಮನೆಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ. ಈ ಒಂದು ಘಟನೆಯಿಂದಾಗಿ ಮನೆಯಲ್ಲಿದ್ದ ಅಪಾರ ಪ್ರಮಾಣದ ದವಸ ಧಾನ್ಯ, ಮನೆಯ ಪರಿಕರಗಳು ಸುಟ್ಟು ಭಸ್ಮವಾಗಿವೆ. ಮನೆಯಲ್ಲಿದ್ದ 10 ಲಕ್ಷ ರೂ. ಮೌಲ್ಯದ ಹತ್ತಿ, ತೊಗರಿ ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದುಬಂದಿದೆ. ತಕ್ಷಣ ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಬಂದು ಬೆಂಕಿ ನಲ್ಲಿ ಯಶಸ್ವಿಯಾದರು