ಮಂಡ್ಯ : ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯೊಂದು ಬೆಂಕಿಗೆ ಆಹುತಿ ಆಗಿರುವ ಘಟ್ನೆ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆ ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಹೊಸ ಹೊಳಲು ಗ್ರಾಮದಲ್ಲಿ ನಡೆದಿದೆ.
ಹೊಸಹೂಳಲು ಗ್ರಾಮದ ಮಹೇಶ್ ಎಂಬುವವರ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿ ಆಗಿದೆ. ಈ ಒಂದು ಅವಘಡದಲ್ಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಮನೆಯಲ್ಲಿ ಯಾರು ಇಲ್ಲದಿದ್ದರಿಂದ ಭಾರಿ ದುರಂತ ತಪ್ಪಿದೆ ಘಟನೆ ಕುರಿತು ಕೆಆರ್ ಪೇಟೆ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.