ಬೆಂಗಳೂರು : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಎರಡನೇ ಮದುವೆಯಾಗಿದ್ದ ಗ್ರಹಿಣಿ ಶೈಲಜಾ (36) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ 27ನೇ ಕ್ರಾಸ್ ನಲ್ಲಿ ಈ ಒಂದು ಘಟನೆ ನಡೆದಿದೆ ವೆಂಕಟೇಶ್ ಎಂಬ ಅವರನ್ನು ಶೈಲಜಾ ಎರಡನೇ ಮದುವೆಯಾಗಿದ್ದರು ವೆಂಕಟೇಶ ಮನೆಯವರು ಚಿತ್ರಹಿಂಸೆ ಕೊಟ್ಟ ಆರೋಪ ಕೇಳಿ ಬಂದಿದೆ. ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಆರೋಪ ಕೇಳಿ ಬರುತ್ತಿದೆ. ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಗೆ ಮೃತಳ ಕುಟುಂಬಸ್ಥರು ದೂರು ನೀಡಿದ್ದಾರೆ.








