ದಕ್ಷಿಣಕನ್ನಡ : ಎಷ್ಟು ದಿನ ಅಂತ ಲವ್ ಜಹಾದ್ ಬಗ್ಗೆ ಮಾತನಾಡುತ್ತಿರೋಣ? ಎಷ್ಟು ದಿನ ಅಂತ ನಮ್ಮ ಹೆಣ್ಣು ಮಕ್ಕಳನ್ನೇ ನೋಡುತ್ತಿರಿ? ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ, ಮದುವೆಯಾಗಿ ಎಂದು ದಕ್ಷಿಣ ಕನ್ನಡದ ಉಳ್ಳಾಲ ತಾಲೂಕಿನ ಕುತ್ತಾರೂನಲ್ಲಿ ಚಕ್ರವರ್ತಿ ಸೂಲಿಬೆಲೆ ಹೇಳಿಕೆ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಅನ್ಯ ಧರ್ಮದವರನ್ನು ಪ್ರೀತಿಸಿ, ಮದುವೆಯಾಗಿ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿಕೆ ಪರ ವಿರೋಧ ಚರ್ಚೆಗೆ ಕಾರಣವಾಗಿದೆ. ದಕ್ಷಿಣ ಕನ್ನಡದ ಉಳ್ಳಾಲ ತಾಲೂಕಿನ ಕುತ್ತಾರೂನಲ್ಲಿ ಕಾರ್ಯಕ್ರಮದಲ್ಲಿ ಎಲ್ಲಿವರೆಗೂ ಲವ್ ಜಿಹಾದ್ ಬಗ್ಗೆ ಮಾತನಾಡುತ್ತಿರೋಣ? ಸ್ವಲ್ಪ ಬದಲಾವಣೆ ತರೋಣ. ಹುಡುಗಿ ಸಿಗಲಿಲ್ಲ ಅಂತ ಎಷ್ಟು ದಿನ ನೀವು ಹೇಳುತ್ತೀರಿ? ಎಷ್ಟು ದಿನ ಅಂತ ನಮ್ಮದೇ ಹೆಣ್ಣು ಮಕ್ಕಳನ್ನು ನೋಡ್ತೀರಾ?ಅನ್ಯ ಧರ್ಮದೇವತೆಯನ್ನು ಪ್ರೀತಿಸಿ ಮದುವೆಯಾಗಿ ಎಂದು ಹೇಳಿಕೆ ನೀಡಿದ್ದಾರೆ.