ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಇಂದು ಘೋರವಾದ ದುರಂತ ಸಂಭಾವಿಸಿದ್ದು, ಪಾಲಿಕೆಯ ತ್ಯಾಜ್ಯ ಸಂಗ್ರಹಿಸುವ ವಾಹನ ಹರಿದು 6 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಸೋನಿಯಾ ಗಾಂಧಿನಗರದಲ್ಲಿ ಇಂದು ನಡೆದಿದೆ.
ವೇಗವಾಗಿ ಬಂದ ವಾಹನ ಹರಿದು ಹಮೀದಾ ಬಾನು ಕಬ್ಬಾಡೆ (6) ಎನ್ನುವ ಬಾಲಕಿ ಸ್ಥಳದಲ್ಲೇ ಸಾವನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ವಾಹನದ ಚಾಲಕನ ನಿರ್ಲಕ್ಷದಿಂದಲೇ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಲಾಗುತ್ತಿದ್ದು, ಹುಬ್ಬಳ್ಳಿ ಧಾರವಾಡ ಪಾಲಿಕೆ ಸಿಬ್ಬಂದಿ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಬಾಲಕಿ ಶವವನ್ನು ಪೊಲೀಸರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.