ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದ ಬೆನ್ನಲ್ಲೇ ಇದೀಗ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಾಲಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಯ್ಯಪ್ಪ ಮಾಲಾಧಿಕಾರಿಗಳು ಗಾಯಗೊಂಡಿರುವ ಘಟನೆ ನಡೆದಿತ್ತು. ಈಶ್ವರ ದೇವಸ್ಥಾನದಲ್ಲಿ ರಾತ್ರಿ ಮಲಗಿದ್ದಾಗ ಸಿಲಿಂಡರ್ ಸ್ಪೋಟಗೊಂಡಿದೆ. ಘಟನೆಯಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಈ ಪೈಕಿ ನಿಜಲಿಂಗಪ್ಪ ಬೇಪುರಿ (58) ಹಾಗೂ ಸಂಜಯ್ ಸವದತ್ತಿ (18)ಚಿಕಿತ್ಸೆ ಫಲಿಸದೇ ನಿನ್ನೆ ಸಾವನ್ನಪ್ಪಿದ್ದಾರೆ. ಇದೀಗ ಮತ್ತೊಬ್ಬರು ಸಾವನ್ನಪ್ಪಿದ್ದಾರೆ.
ಗ್ಯಾಸ್ ಸೋರಿಕೆಯಾಗಿ ದೀಪದ ಬೆಂಕಿ ತಗುಲಿ ಸಿಲಿಂಡರ್ ಸ್ಪೋಟಗೊಂಡಿದ್ದು,. ಗಾಯಾಳು ಅಯ್ಯಪ್ಪ ಭಕ್ತರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.