ಹುಬ್ಬಳ್ಳಿ : ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಬಿವಿಬಿ ಕಾಲೇಜ್ ಆವರಣದಲ್ಲಿ ನೇಹಾ ಹಿರೇಮಠ್ ಕೊಲೆ ಪ್ರಕರಣ ಇನ್ನೂ ಜೀವಂತವಾಗಿರುವಾಗಲೇ ಇದೀಗ ಹುಬ್ಬಳ್ಳಿ ನಗರದಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಸದ್ದು ಮಾಡುತ್ತಿದೆ.
ಹೌದು ಮುಸ್ಲಿಂ ಯುವಕನೊಬ್ಬ ಅಪ್ರಾಪ್ತ ಹಿಂದೂ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನಂತೆ ಮುಸ್ಲಿಂ ಯುವಕನೊಬ್ಬನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಬಂಧಿತ ಆರೋಪಿಯನ್ನು ಸದ್ದಾಂ ಹುಸೇನ್ ಲಿಂಬುವಾಲೆ ಎಂದು ಹೇಳಲಾಗುತ್ತಿದ್ದು, ಅಮರಗೋಳದ ಅಪ್ರಾಪ್ತ ಬಾಲಕಿ ಜತೆ ಸಲುಗೆ ಬೆಳೆಸಿ, ಪ್ರೀತಿಸುವಂತೆ ನಂಬಿಸಿ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಮನೆಯಲ್ಲಿ ಹೇಳಿದರೆ, ಜೀವಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆ ನವನಗರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ.
ಕಳೆದ ನಾಲ್ಕು ದಿನಗಳಿಂದ ಬಾಲಕಿಯು ನಿರಂತರವಾಗಿ ವಾಂತಿ ಮಾಡಿಕೊಳ್ಳುತ್ತಿದ್ದಳು. ಇದರಿಂದ ಆತಂಕಗೊಂಡ ಆಕೆ ಪುರುಷಕರು ನಗರದ ಕೆಂಚ ಆಸ್ಪತ್ರೆಗೆ ದಾಖಲಿಸಿದರು ಅಲ್ಲಿ ವೈದಿರು ಪರೀಕ್ಷೆ ಮಾಡಿದ ಬಳಿಕ ಬಳಕೆ ಗರ್ಭಿಣಿ ಆಗಿರುವುದು ಪದ್ಯ ಆಗಿದೆ ಈ ಕುರಿತು ಬಾಲಕಿಯನ್ನು ಜಾರಿಸಿದಾಗ ಆಕೆ ಎಲ್ಲ ಸತ್ಯವನು ಬಾಯಿಬಿಟ್ಟಿದ್ದಾಳೆ. ತಕ್ಷಣ ಬಾಲಕಿಯ ತಂದೆ-ತಾಯಿ ನವನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆರೋಪಿಯನ್ನು ಈಶ್ವರನಗರದ ಸದ್ದಾಂ ಹುಸೇನ್ ಲಿಂಬುವಾಲೆ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಐಪಿಸಿ 376, 506, ಜಾತಿ ನಿಂದನೆ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯನ್ನು ಚಿಕಿತ್ಸೆಗಾಗಿ ಇಲ್ಲಿನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಶುಕ್ರವಾರ ಸಂಜೆ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದು, ಇದರಿಂದ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.