ಬೆಂಗಳೂರು : 2022ರಲ್ಲಿ ಹುಬ್ಬಳ್ಳಿ ಪೊಲೀಸ್ ಠಾಣೆ ಮುಂದೆ ಗಲಭೆ ನಡೆಸಿದ್ದ ಆರೋಪದ ಮೇಲೆ ಜೈಲು ಸೇರಿದ್ದ 105 ಮಂದಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮಸೀದಿಯ ಮೇಲೆ ಭಗವಾಧ್ವಜ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದನ್ನು ಖಂಡಿಸಿ ಗಲಭೆ ನಡೆಸಿದ್ದ ಆರೋಪದಲ್ಲಿ 105 ಮಂದಿಗೆ ಇದೀಗ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಇದೇ ಪ್ರಕರಣದಲ್ಲಿ ಆರೋಪಗಳಾಗಿದ್ದ ಇತರೆ 39 ಮಂದಿಗೆ ಸುಪ್ರೀಂಕೋರ್ಟ್ ಈಗಾಗಲೇ ಜಾಮೀನು ನೀಡಿತ್ತು ಎಂದು ಅರ್ಜಿದಾರರ ಪರ ವಕೀಲ ರಹಮತ್‌ವುಲ್ಲಾ ಕೊತ್ವಾಲ್ ಮಂಡಿಸಿದ್ದ ವಾದ ಪರಿಗಣಿಸಿದ ನ್ಯಾಯಪೀಠ, ಎಲ್ಲ ಅರ್ಜಿದಾರರಿಗೆ ಜಾಮೀನು ನೀಡಿದೆ. ಜತೆಗೆ, ಎಲ್ಲ ಅರ್ಜಿದಾರರು 2 ಲಕ್ಷ ರು. ವೈಯಕ್ತಿಕ ಬಾಂಡ್, ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತಾ ಖಾತರಿ ನೀಡಬೇಕು ಎಂಬುದು ಸೇರಿದಂತೆ ವಿವಿಧ ಷರತ್ತು ವಿಧಿಸಿದೆ ಎನ್ನಲಾಗಿದೆ.