ಹುಬ್ಬಳ್ಳಿ : ಮುಸ್ಲಿಂ ಯುವಕನನ್ನು ಮದುವೆಯಾಗಿದ್ದ ಹಿಂದೂ ಯುವತಿಗೆ ಪತಿ ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವಂತೆ ಕಿರುಕುಳ ನೀಡಿದ್ದಾನೆ ಈ ವಿಚಾರವಾಗಿ ಪತ್ನಿ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪತಿಯ ವಿರುದ್ಧ ಇದೀಗ ದೂರು ದಾಖಲಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಪತಿ ಶಫಿ ಅಹ್ಮದ್ ಕರ್ನೂಲ್ ವಿರುದ್ಧ ಪತ್ನಿ ಲಕ್ಷ್ಮೀ ಕಿರುಕುಳ ಆರೋಪ ಮಾಡಿದ್ದಾರೆ. ಈ ಕುರಿತು ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪತಿ ವಿರುದ್ಧ ದೂರನ್ನು ಸಹ ದಾಖಲಿಸಿದ್ದಾರೆ.ಇವರು ಕಳೆದ 2014-15ರಲ್ಲಿ ಪ್ರೀತಿಸಿ ರಿಜಿಸ್ಟರ್ ಮದುವೆಯಾಗಿದ್ದರು. 2017ರಲ್ಲಿ ಅಧಿಕೃತವಾಗಿ ಮದುವೆಯಾಗಿದ್ದರು. ಬಳಿಕ ಶಫಿ ಮತ್ತು ಲಕ್ಷ್ಮೀ ದಂಪತಿ ಹುಬ್ಬಳ್ಳಿಯ ಮಂಟೂರು ರಸ್ತೆ ವಾಸವಾಗಿದ್ದರು.
ಅನಿಲ್ ಎಂಬ ಹೆಸರು ಹೇಳಿ ಶಫಿ ಅಹ್ಮದ್ ಮದುವೆಯಾಗಿದ್ದ. ಶಫಿ ಸುಳ್ಳು ಹೇಳಿ ಮದುವೆಯಾಗಿದ್ದಾನೆಂದು, ಮದುವೆ ಬಳಿಕ ಇಸ್ಲಾಂಗೆ ಮತಾಂತರವಾಗುವಂತೆ ಕಿರುಕುಳ ನೀಡುತ್ತಿರುವುದಾಗಿ ಲಕ್ಷ್ಮೀ ಆರೋಪಿಸಿದ್ದಾರೆ. ಸದ್ಯ ಈ ವಿಚಾರವಾಗಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಗೆ ಲಕ್ಷ್ಮೀ ದೂರು ನೀಡಿದ್ದಾರೆ.