ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರೀ ಬೆಳವಣಿಗೆ ನಡೆದಿದ್ದು, ಔತಣಕೂಟದ ನೆಪದಲ್ಲಿ ಕಾಂಗ್ರೆಸ್, ಬಿಜೆಪಿ,ಜೆಡಿಎಸ್ ನ 56 ಕ್ಕೂ ಹೆಚ್ಚು ಶಾಸಕರು ಮಹತ್ವದ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಔತಣಕೂಟದ ನೆಪದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮೂರು ಪಕ್ಷಗಳ 56 ಕ್ಕೂ ಹೆಚ್ಚು ಶಾಸಕರು ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಚಿವ ಸಂತೋಷ್ ಲಾಡ್ ಸೇರಿದಂತೆ ಹಲವು ಘಟಾನುಘಟಿ ನಾಯಕರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಔತಣಕೂಡದಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಈ ಸಭೆಯಲ್ಲಿ ಒಕ್ಕಲಿಗ ಹಾಗೂ ಲಿಂಗಾಯತ ಶಾಸಕರೇ ಹೆಚ್ಚು ಇದ್ದರು ಎಂದು ಹೇಳಲಾಗಿದೆ.