ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಮೃತ ಹಳ್ಳಿಯಲ್ಲಿ 3 ಕೋಟಿ ಮೌಲ್ಯದ ಡ್ರಗ್ ಮತ್ತು ದ್ವಜವನ್ನು ಸೀಸ್ ಮಾಡಿದ್ದಾರೆ ಈ ವೇಳೆ ನೈಜೀರಿಯಾ ಪ್ರಜೆ ಪೇಪೇಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತ ನೈಜೆರಿಯಾ ಆರೋಪಿಯು ಅಮೃತಹಳ್ಳಿಯಲ್ಲಿ ಎಂಡಿಎಂಎ ಕ್ರಿಸ್ಟಲ್ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿ ಪೇಪೇಯನ್ನು ಬಂಧಿಸಿದ್ದಾರೆ. ಬಂಧಿತನ ಬಳಿ 3 ಕೋಟಿ ರೂಪಾಯಿ ಮೌಲ್ಯದ 3 ಕೆ.ಜಿ ಡ್ರಗ್ಸ್ ಮತ್ತು ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ. ಅಮೃತ ಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ