ಶಿವಮೊಗ್ಗ : ಸೊರಬ ತಾಲ್ಲೂಕಿನ ಉಳವಿ ಸಮೀಪದ ಕರ್ಜಿಕೊಪ್ಪ ಬಳಿಯಲ್ಲಿ ಕ್ಯಾಂಟರ್ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಇಬ್ಬರಿಗೆ ಗಂಭೀರ ಗಾಯವಾಗಿದೆ.
ಗಾಯಾಳುಗಳಿಗೆ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಸಾಗರಕ್ಕೆ ಕರೆದೊಯ್ಯಲಾಗಿದೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ದಾರಿ ಹೋಕರಿಗೆ ತೊಂದರೆ
ಮಳೆಗಾಲ ಆರಂಭಕ್ಕೆ ಮುನ್ನ ಬೀಳುವಂತೆ ಇದ್ದ ಮರಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಕಡಿತಲೆ ಮಾಡದೇ ಇದ್ದದ್ದೇ ಘಟನೆಗೆ ಕಾರಣ ಅಂತ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾರಿಗೆ ಅಡ್ಡಲಾಗಿ ಕ್ಯಾಂಟರ್ ಮೇಲೆ ಬಿದ್ದಿರುವ ಮರವನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ.
ವಸಂತ ಬಿ ಈಶ್ವರಗೆರೆ, ಸಂಪಾದಕರು, kannadanewsnow.com- 9738123234