ಚಿಕ್ಕಮಗಳೂರು : ಬಿಜೆಪಿ ಎಂಎಲ್ ಸಿ ಸಿಟಿ ರವಿ ಬಂಧನ ಖಂಡಿಸಿ ಚಿಕ್ಕಮಗಳೂರಿನಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಚಿಕ್ಕಮಗಳೂರಿನ ಹನುಮಂತಪ್ಪ ಸರ್ಕಲ್ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹನುಮಂತಪ್ಪ ವೃತ್ತದಲ್ಲಿ 100 ಕ್ಕೂ ಪೊಲೀಸರನ್ನು ನಿಯೋಜಿಸಲಾಗಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಸುವರ್ಣಸೌಧದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಲಾಗಿದ್ದು, ಬೆಳಗಾವಿಯಿಂದ ಇಂದು ಬೆಂಗಳೂರಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ.