ಹೈದರಾಬಾದ್: ಸಿಟಿ ಸಿವಿಲ್ ಕೋರ್ಟ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, 11 ಗಂಟೆಗೆ ಅದು ಗಮನಕ್ಕೆ ಬಂದಿದೆ. ನ್ಯಾಯಾಲಯದ ಆವರಣವನ್ನು ಶೋಧಿಸಲಾಗುತ್ತಿದೆ.
ತೆಲಂಗಾಣದ ಹೈದರಾಬಾದ್ ಸಿಟಿ ಸಿವಿಲ್ ಕೋರ್ಟ್ ಗೆ ಮಂಗಳವಾರ ಮುಂಜಾನೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ವರದಿಯಾದ ಕೂಡಲೇ ಬಾಂಬ್ ನಿಷ್ಕ್ರಿಯ ದಳ ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ತಲುಪಿದರು.
ವಿವರಗಳ ಪ್ರಕಾರ, ನ್ಯಾಯಾಲಯದ ಅಧಿಕಾರಿಗಳಿಗೆ ಮುಂಜಾನೆ 3.15 ಕ್ಕೆ ಬೆದರಿಕೆ ಇಮೇಲ್ ಬಂದಿದೆ. ಬೆಳಿಗ್ಗೆ ೧೧ ಗಂಟೆಗೆ ಇಮೇಲ್ ನೋಡಿದ ಅಧಿಕಾರಿಗಳು ತಕ್ಷಣ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದರು.