ಬೆಂಗಳೂರು : ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 39.37 ಲಕ್ಷ ಮೌಲ್ಯದ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
39.37 ಲಕ್ಷ ಮೌಲ್ಯದ 1 ಕೆಜಿ 125 ಗ್ರಾಂ ಹೈಡ್ರೋಪೋನಿಕ ಗಾಂಜಾ ಜಪ್ತಿ ಮಾಡಿದ್ದಾರೆ. ಆರೋಪಿಯು ಫೋಟೋ ಫ್ರೇಮ್ನಲ್ಲಿ ಅಡಗಿಸಿ ಬಿಟ್ಟು ಗಾಂಜಾ ಸಾಗಾಟ ಮಾಡುತ್ತಿದ್ದ. ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯ ಬಳಿ ಗಾಂಜಾ ಪತ್ತೆಯಾಗಿದೆ. ಆರೋಪಿಯನ್ನು ಗಾಜಾ ಸಮೇತ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. NDPS ಕಾಯ್ದೆಯ ಅಡಿ ಅಧಿಕಾರಿಗಳಿಂದ ಪ್ರಕರಣ ದಾಖಲಾಗಿದೆ.








