ಕೋಲಾರ : ಸದ್ಯ ರಾಜ್ಯದಲ್ಲಿ ಯಾವುದೇ ಸಚಿವ ಸಂಪುಟ ಪುನರ್ ರಚನೆ ಹಾಗೂ ವಿಸ್ತರಣೆ ಇಲ್ಲ ಎಂದು ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಆದರೆ ಕೋಲಾರ ಜಿಲ್ಲೆಯ ಮಾಲೂರು ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ ನಾನು ಕೂಡ ಸಚಿವ ಸ್ಥಾನಕ್ಕೆ ಅರ್ಹನಿದ್ದೇನೆ ಎಂದು ಸಚಿವ ಸ್ಥಾನದ ಬೇಡಿಕೆ ಮುಂದೆ ಇಟ್ಟಿದ್ದಾರೆ.
ಕೋಲಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಶಾಸಕ ನಂಜೇಗೌಡ ಸಚಿವ ಸ್ಥಾನದ ಕುರಿತು ಆಗ್ರಹಿಸಿದ್ದು, ಈ ಬಾರಿ ಕೋಲಾರ ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕು. ಜಿಲ್ಲೆಯಲ್ಲಿ ನಾಲ್ವರು ಕಾಂಗ್ರೆಸ್ ಶಾಸಕರಿದ್ದೇವೆ. ಹಾಗಾಗಿ ಮಂತ್ರಿ ಸ್ಥಾನ ಬೇಕು. ಅಲ್ಲದೇ ಸಚಿವ ಸ್ಥಾನಕ್ಕೆ ನಾನು ಅರ್ಹನಿದ್ದೇನೆ ಎಂದು ಶಾಸಕ ಕೆ ವೈ ನಂಜೇಗೌಡ ತಿಳಿಸಿದರು.
ಮಾಲೂರು ತಾಲೂಕಿನಲ್ಲಿ ನಾನು ಕಾಂಗ್ರೆಸ್ ಕಟ್ಟಿ ಬೆಳೆಸಿದ್ದೇನೆ. ತುಂಬಾ ಕಷ್ಟದಲ್ಲಿ ಎರಡನೇ ಬಾರಿ ಆಯ್ಕೆಯಾಗಿದ್ದೇನೆ. ಕೋಲಾರ ಜಿಲ್ಲೆಯ ಶಾಸಕರು ಮಂತ್ರಿ ಸ್ಥಾನ ಕೇಳಿದ್ದೇವೆ. ಜಿಲ್ಲೆಯ ಯಾರಿಗೆ ಸಚಿವ ಸ್ಥಾನ ಕೊಟ್ಟರು ನನಗೆ ಒಪ್ಪಿಗೆ ಇದೆ. ಮಂತ್ರಿ ಸ್ಥಾನ ನೀಡುವ ಕುರಿತ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬಿಡುವೆ ಎಂದು ಮಾಲೂರಿನಲ್ಲಿ ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ ತಿಳಿಸಿದರು.