ಮೈಸೂರು : ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ. ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಿದ್ದೇವೆ ಎಂದು ಹೇಳಿದ್ದಾರೆ.
ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನನ್ನ ಪೂರ್ಣ ಸಹಮತವಿದೆ. ಯಾರು ಪಕ್ಷಕ್ಕಿಂತ ದೊಡ್ಡವರಾಗಲು ಸಾಧ್ಯವೇ ಇಲ್ಲ ಎಂದರು.
ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ? ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲೂ ಪುನಃ ಚರ್ಚೆ ಮಾಡುವ ಅಗತ್ಯವೇ ಇಲ್ಲ.
ಕೆ.ಎನ್.ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ಎಸ್.ಎಂ.ಕೃಷ್ಣನವರ ಸರ್ಕಾರ. ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಆದರ ಪ್ರಶ್ನೆಯೇ ಇಲ್ಲ. ಎಸ್.ಎಂ.ಕೃಷ್ಣ ಅವರು ಆಗ ಮುಖ್ಯಮಂತ್ರಿಗಳಿದ್ದರು, ಅವರ ಸರ್ಕಾರ ಮಾಡಿತ್ತು ಎಂದರು.
ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನನ್ನ ಪೂರ್ಣ ಸಹಮತವಿದೆ. ಯಾರು ಪಕ್ಷಕ್ಕಿಂತ ದೊಡ್ಡವರಾಗಲು ಸಾಧ್ಯವೇ ಇಲ್ಲ.
ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ.
ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ…— Siddaramaiah (@siddaramaiah) December 22, 2025








