ಬೆಂಗಳೂರು : ಮಾಜಿ ಶಿಕ್ಷಣ ಸಚಿವ ಹಾಗೂ ಹಾಲಿ ರಾಜಾಜಿನಗರ ಕ್ಷೇತ್ರದ ಬಿಜೆಪಿಯ ಶಾಸಕ ಎಸ್.ಸುರೇಶ್ ಕುಮಾರ್ ಅವರಿಗೆ ರೂಪಾಂತರಿ ಚಿಕನ್ ಗುನ್ಯಾಯಿಂದ ಬಳಳುತ್ತಿದ್ದರು ಹಾಗಾಗಿ ನಿನ್ನೆ ಆರೋಗ್ಯದಲ್ಲಿ ಅವರಿಗೆ ಏರುಪೇರಾಗಿತ್ತು. ಇದೀಗ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಹೌದು ರೂಪಾಂತರಿ ಚಿಕುನ್ ಗುನ್ಯಾ ಸೋಂಕು ತಗುಲಿದ ಕಾರಣ ಸುರೇಶ್ ಕುಮಾರ್ ಕೆಲ ದಿನಗಳ ಹಿಂದೆ ಶೇಷಾದ್ರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಐಸಿಯು ಘಟಕದಲ್ಲಿ ಸುರೇಶ್ ಕುಮಾರ್‌ಗೆ ಚಿಕಿತ್ಸೆ ನೀಡಿದ್ದಾರೆ. ಈಗ ಸುರೇಶ್ ಕುಮಾರ್ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
ರಾಜಾಜಿನಗರದ ಬಿಜೆಪಿ ಶಾಸಕ ಎಸ್ ಸುರೇಶ್ ಕುಮಾರ್ ಅವರು ಮ್ಯೂಟೆಂಟ್ ಚಿಕನ್ ಗುನ್ಯಾದಿಂದ ಬಳಲುತ್ತಿದ್ದರು.ಅಲ್ಲದೇ ಅವರಿಗೆ ಬ್ರೈನ್ ಹಾಗೂ ಸ್ಪೈನಲ್ ಕಾರ್ಡ್ ಸಮಸ್ಯೆ ಕಾಣಿಸಿಕೊಂಡಿತ್ತು ಎನ್ನಲಾಗಿದೆ.ಕಳೆದ ನಾಲ್ಕು ದಿನಗಳಿಂದ ತೀರ್ವ ಜ್ವರದಿದಂ ಬಳಲುತ್ತಿದ್ದಂತ ಅವರನ್ನು ಶೇಷಾದ್ರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.ಇದೀಗ ಅವರು ಗುಣಮುಖರಾಗಿದ್ದು, ಡಿಸ್ಚಾರ್ಜ್ ಆಗಿದ್ದಾರೆ.