ದಾವಣಗೆರೆ : ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಪಟ್ಟಂತೆ ಕ್ಷೇತ್ರವನ್ನು ಕೇಂದ್ರ ಹೆಚ್‍ಡಿ ಕುಮಾರಸ್ವಾಮಿ ಬಿಟ್ಟುಕೊಡಲ್ಲ ಅಂದಿದ್ದಾರೆ. ಇನ್ನೊಂದೆಡೆ ಮಾಜಿ ಶಾಸಕ ಸಿಪಿ ಯೋಗೇಶ್ವರ್ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಒಲವು ತೋರಿದ್ದಾರೆ.ಇದರ ಮಧ್ಯ ಕಾಂಗ್ರೆಸ್ ನಿಂದ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಹಾಗಾಗಿ ಚನ್ನಪಟ್ಟಣ ಬೈ ಎಲೆಕ್ಷನ್ ತೀವ್ರ ಕುತೂಹಲ ಮೂಡಿಸಿದೆ.
ಇದೀಗ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವಿಚಾರವಾಗಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಅವರು ಅಚ್ಚರಿಯ ಹೇಳಿಕೆ ನೀಡಿದ್ದು, ಏನೇ ಆಗಲಿ ಚನ್ನಪಟ್ಟಣ ಉಪಚುನಾವಣೆಗೆ ಎನ್.ಡಿ.ಎ ಅಭ್ಯರ್ಥಿ ನಾನೇ ಎಂದು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಹಾಗಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ ಎಂಬ ಊಹಾಪೋಹಕ್ಕೆ ತೆರೆ ಎಳೆದಿದ್ದಾರೆ.
ಇನ್ನು ಕಳೆದ ಎರಡು ದಿನಗಳ ಹಿಂದೆ ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಪಟ್ಟಂತೆ ಇನ್ನೇನು ಕೇವಲ ಒಂದು ವಾರದಲ್ಲಿ ಚನ್ನಪಟ್ಟಣ ಉಪಚುನಾವಣೆಯ ದಿನಾಂಕ ಘೋಷಣೆ ಆಗುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದ್ದರು. ಬಳಿಕ ಬಿಜೆಪಿಯ ಮಾಜಿ ಶಾಸಕ ಸಿಪಿ ಯೋಗೇಶ್ವರ್ ದೆಹಲಿಗೂ ಕೂಡ ಭೇಟಿ ನೀಡಿದ್ದರು. ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಬಿಜೆಪಿಗೆ ಗೊಂದಲಮಯವಾಗಿದೆ. ಹಾಗಾಗಿ ಈ ಒಂದು ಉಪಚುನಾವಣೆ ತೀವ್ರ ಕುತೂಹಲ ಘಟ್ಟ ತಲುಪಿದೆ ಎಂದು ಹೇಳಲಾಗುತ್ತಿದೆ.