ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದೆ ಹಾಗಾಗಿ ನಾಳೆಯಿಂದ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರ ಕುರಿತು ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಇದರ ಬೆನ್ನಲ್ಲೆ, ನಾನು ಯಾರಿಗೂ ಹೆದರಲ್ಲ ಜಗ್ಗಲ್ಲ ಬಗ್ಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ
ಮೈಸೂರಿನಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಅವರು, ನಿಮ್ಮ ಆಶೀರ್ವಾದ ಇರುವವರೆಗೂ ಏನು ಮಾಡೋಕಾಗಲ್ಲ. ಯಾರೂ ನನ್ನ ಏನು ಮಾಡೋಕಾಗಲ್ಲ. ಸ್ವಲ್ಪ ದಿನ ತೊಂದರೆ ಕೊಡಬಹುದು ಅಷ್ಟೇ. ಕಾನೂನು ಮೂಲಕ ಏನು ಮಾಡುವುದಕ್ಕೆ ಆಗಲ್ಲ.
ವಿಪಕ್ಷದವರು ರಾಜೀನಾಮೆ ಕೇಳುತ್ತಿದ್ದಾರಂತೆ ಅಂತ ಹೇಳುತ್ತಿದ್ದಾರೆ. ರಾಜೀನಾಮೆ ಕೇಳುತ್ತಿದ್ದಾರೆ ಎಂದು ನನಗೆ ಎಷ್ಟೋ ಜನ ಹೇಳುತ್ತಿದ್ದಾರೆ. ನಾನು ಯಾರಿಗೂ ಹೆದರಲ್ಲ, ಜಗ್ಗಲ್ಲ, ಬಗ್ಗಲ್ಲ, ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ನಾನು ಕ್ಲಿಯರ್ ಇದ್ದೇನೆ ಎಂದು. ನಾನು ಹೆದರುವ ಪ್ರಶ್ನೆಯೇ ಇಲ್ಲ ಎಂದು ವೇದಿಕೆಯ ಮೇಲೆ ಗುಡುಗಿದರು.