ಮೈಸೂರು : ಪಹಲ್ಗಾಮ್ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯುದ್ಧದ ಪರ ಇಲ್ಲ, ಶಾಂತಿ ಸುವ್ಯವಸ್ಥೆ ಪರ. ಉಗ್ರರ ವಿರುದ್ಧ ಕೇಂದ್ರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಪಾಕ್ ಪ್ರಜೆಗಳನ್ನು ಪತ್ತೆ ಹಚ್ಚುವ ಕೆಲಸ ಮಾಡಲಾಗುತ್ತಿದೆ. ಪಾಕ್ ಪ್ರಜೆಗಳನ್ನು ಪತ್ತೆ ಹಚ್ಚಿ ಕೇಂದ್ರಕ್ಕೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.