ತುಮಕೂರು : ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸದಿರುವುದಕ್ಕೆ ತುಂಬಾ ಬೇಸರವಾಗುತ್ತಿದೆ. ನೀವು ಹೇಳಿದರೆ ಕೂಡಲೇ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಸ್ಫೋಟಕವಾದಂತಹ ಹೇಳಿಕೆ ನೀಡಿದರು.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ನಿನ್ನೆ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು ಈ ಒಂದು ಸಭೆಯಲ್ಲಿ ಮಾತನಾಡಿದ ಅವರು ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸದಿರುವುದಕ್ಕೆ ತುಂಬಾ ಬೇಸರವಾಗುತ್ತಿದೆ. ಇತ್ತೀಚಿಗೆ ಕ್ಷೇತ್ರದ ಕಾರ್ಯಕರ್ತರೊಂದಿಗೆ ಬೇರೆಯಲು ಆಗುತ್ತಿಲ್ಲ ನಿಮ್ಮ ಮನಸ್ಸಿನ ಆಕಾಂಕ್ಷಿಯಂತೆ ಸ್ಪಂದಿಸಲು ನನಗೆ ಸಾಧ್ಯವಾಗುತ್ತಿಲ್ಲ ಎಂದು ಸಭೆಯಲ್ಲಿ ಕಾರ್ಯಕರ್ತರ ಬಳಿ ಕ್ಷಮೆ ಕೇಳಿದ ಸಚಿವ ಪರಮೇಶ್ವರ್.
ನೀವು ಹೇಳಿದರೆ ಗೃಹ ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡಲು ಸಿದ್ದ ಎಂದು ತಿಳಿಸಿದರು. ಪರಮೇಶ್ವರ್ ಅವರ ಹೇಳಿಕೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಕ್ಷಣಕಾಲ ವಿಚಲಿತರಾಗಿದ್ದರು. ತಕ್ಷಣ ರಾಜೀನಾಮೆ ಕೊಡಬೇಡಿ ಅಂತ ಕಾರ್ಯಕರ್ತರು ಕೂಗಿದರು. ನೀವು ಇನ್ನು ಮುಖ್ಯಮಂತ್ರಿ ಆಗಬೇಕು ರಾಜಿನಾಮೆ ಕೊಡಬೇಡಿ ಎಂದು ಪರಮೇಶ್ವರಿಗೆ ಕಾರ್ಯಕರ್ತರು ಮನವಿ ಮಾಡಿದರು. ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಈ ಒಂದು ಘಟನೆ ನಡೆಯಿತು.